![](https://kannadadunia.com/wp-content/uploads/2020/05/Temperature.jpg)
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ಜಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆ ರಾಜ್ಯದಲ್ಲಿ ಈ ವರ್ಷ ಬರೋಬ್ಬರಿ ನಾಲ್ಕು ತಿಂಗಳು ರಣಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಬಿಸಿಲಿನ ಕಾವು ಹೆಚ್ಚಿದ್ದು, ವಾಡಿಕೆಗಿಂತ ಮುನ್ನವೇ ರಾಜ್ಯದಲ್ಲಿ ಬಿಸಿಲಿನ ಕಾವು ಹೆಚ್ಚಿದೆ. ಸಾಮಾನ್ಯವಾಗಿ ಮಾರ್ಚ್ ನಿಂದ ಮೇ ತಿಂಗಳವರೆಗೆ ಬೇಸಿಗೆ ಇರುತ್ತದೆ. ಆದರೆ ಈ ಬಾರಿ ವಾಡಿಕೆಗಿಂತ ಮುನ್ನವೇ ಬೇಸಿಗೆ ಶುರುವಾಗುಂತಾಗಿದ್ದು, ನಾಲ್ಕು ತಿಂಗಳು ಬೇಸಿಗೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಉಷ್ಣತೆ ಹೆಚ್ಚಳ, ಬಿಸಿಗಾಳಿಯ ಆತಂಕ ಎದುರಾಗಿದ್ದು, ಏಪ್ರಿಲ್ ಮತ್ತು ಮೇ ನಲ್ಲಿ ಶಾಖಾ ತರಂಗ ಬೀಸಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.