ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ವಾಡಿಕೆಗಿಂತ ಸರಾಸರಿ 2-5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಉಷ್ಣಾಂಶ 2-5 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತೀದೆ. ಕಾರವಾರದಲ್ಲಿ ಗರಿಷ್ಠ ತಾಪಮಾನ 36. ಡಿಗ್ರಿ ಸೆಲ್ಸಿಯಸ್ ದಾಖಲಾದ್ರೆ, ಕಲಬುರಗಿಯಲ್ಲಿ 34.4, ಹೊನ್ನಾವರ 33.7, ಮಂಗಳೂರು 33.2, ಗದಗ, 33.2, ರಾಯಚೂರು 32.6, ಬಾದಮಿ 32.3, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ 32.2, ಚಿತ್ರದುರ್ಗದಲ್ಲಿ 32, ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಇನ್ನು ರಾಜ್ಯದಲ್ಲಿ ಈ ಬಾರಿ ನೈಋತ್ಯ ಮುಂಗಾರು ಕೊರತೆ ಆಗಿದ್ದು, ಅ. 1 ರಿಂದ ಆರಂಭವಾಗಿರುವ ಈಶಾನ್ಯ ಮುಂಗಾರು ಸಹ ದುರ್ಬಲಗೊಂಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ಭಾಗದಲ್ಲಿ ಉಷ್ಣಾಂಶ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.