ಬೆಂಗಳೂರು: ರಾಜ್ಯದ ವಿವಿಧೆಡೆ ತಾಪಮಾನ ಕುಸಿತವಾಗಿದ್ದು, ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಸೋಮವಾರದಿಂದ ಮುಂದಿನ ಮೂರು ದಿನಗಳು ಕನಿಷ್ಠ ತಾಪಮಾನ 2 ರಿಂದ 4 ಡಿಗ್ರಿವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಕುಸಿತ ಕಂಡಿದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ಬೆಂಗಳೂರು, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಕುಸಿತ ಕಂಡಿದೆ. ಮಂಗಳವಾರದಿಂದ ಕೆಲವು ಕಡೆ ಸಾಧಾರಣ ಮಳೆ ಆಗುವ ಸಂಭವ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ಮೈಸೂರು, ಮಂಡ್ಯ ಜಿಲ್ಲೆಯ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.