alex Certify ದಲಿತರಿಗೆ ದೇವಾಲಯ ಪ್ರವೇಶಕ್ಕೆ ವಿರೋಧ: ಅರ್ಚಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಲಿತರಿಗೆ ದೇವಾಲಯ ಪ್ರವೇಶಕ್ಕೆ ವಿರೋಧ: ಅರ್ಚಕ ಅರೆಸ್ಟ್

ಹಾಸನ: ಹಾಸನ ಜಿಲ್ಲೆ ಕೊಣನೂರು ಸಮೀಪದ ಬಿದರೂರಿನ ಬಸವೇಶ್ವರ ದೇವಸ್ಥಾನಕ್ಕೆ ದಲಿತರ ಪ್ರವೇಶಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೇಗುಲದ ಅರ್ಚಕ ಕಾಂತರಾಜು ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಇತ್ತೀಚೆಗೆ ಗ್ರಾಮದಲ್ಲಿ ನಡೆದ ಬಸವೇಶ್ವರ ಜಾತ್ರೆ ಸಂದರ್ಭದಲ್ಲಿ ದಲಿತರಿಗೆ ದೇವಾಲಯ ಪ್ರೇವೇಶಕ್ಕೆ ಅಡ್ಡಿಪಡಿಸಿದ ಕುರಿತಾಗಿ ಪ್ರಕರಣ, ದಾಖಲಾಗಿತ್ತು. ಗ್ರಾಮದ ಐದು ಜನರ ವಿರುದ್ಧ ದೂರು ದಾಖಲಿಸಿದ್ದು, ಅರ್ಚಕರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಗ್ರಾಮದಲ್ಲಿ ಸಶಸ್ತ್ರ ಪೊಲೀಸ್ ಮೀಸಲು ಪಡೆ ನಿಯೋಜಿಸಲಾಗಿದೆ.

ಪ್ರತಿ ವರ್ಷ ಜಾತ್ರೆಯ ಬಳಿಕ ಯುಗಾದಿ ಹಬ್ಬದವರೆಗೆ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಹರಕೆ ಹೊತ್ತವರು, ಭಕ್ತರು ಬಸವೇಶ್ವರ ಸ್ವಾಮಿ ಉತ್ಸವ ನಡೆಸುವುದು ಸಂಪ್ರದಾಯವಾಗಿದ್ದು, ಈಗ ಈ ಪ್ರಕರಣದಿಂದ ಉತ್ಸವಕ್ಕೆ ಹಿನ್ನಡೆಯಾದಂತಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...