ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಆ.14,15 ರಂದು ಧಾರ್ಮಿಕ ದತ್ತಿ ಇಲಾಖೆ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ತಿಳಿಸಲಾಗಿದೆ.
75 ನೇ ಸ್ವಾತಂತ್ರ್ಯ ಮಹೋತ್ಸವ ಅಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆಯಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಆ.14 ಮತ್ತು ಆ.15 ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಆ.15 ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಯನ್ನು ಮಾಡಬೇಕು ಎಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತ ಯಂ.ಹೆಚ್. ಪ್ರಕಾಶ್ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.