ಬೆಂಗಳೂರು: ಮುಜರಾಯಿ ಇಲಾಖೆ ದೇವಾಲಯಗಳಲ್ಲಿರ ನೌಕರರ ನಡುವಿನ ವೇತನ ತಾರತಮ್ಯ ನಿವಾರಣೆಗೆ ಸರ್ಕಾರ ಕ್ರಮ ಕೈಗೊಂಡಿದೆ.
ಸಿಬ್ಬಂದಿಯ ಮೂಲವೇತನದ ಶೇಕಡ 17ರಷ್ಟು ಮಧ್ಯಂತರ ಪರಿಹಾರ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಾ. 16 ರಂದು ಆದೇಶ ಹೊರಡಿಸಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲವೇತನದ ಶೇಕಡ 17 ಮಧ್ಯಂತರ ಪರಿಹಾರವನ್ನು ಸರ್ಕಾರಿ ನೌಕರರಿಗೆ ಮಂಜೂರು ಮಾಡಲಾಗಿದೆ. ಈಗಾಗಲೇ ಆರನೇ ವೇತನ ಶ್ರೇಣಿ ಪಡೆಯುತ್ತಿರುವ ಮುಜರಾಯಿ ದೇವಾಲಯದ ನೌಕರರಿಗೆ ದೇವಾಲಯದ ಒಟ್ಟು ಸಿಬ್ಬಂದಿ ವೆಚ್ಚ ದೇವಾಲಯದ ವಾರ್ಷಿಕ ಆದಾಯದ ಶೇಕಡ 35 ರಷ್ಟು ಮೀರದಿದ್ದಲ್ಲಿ ಶೇಕಡ 17ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಲು ಆದೇಶ ಹೊರಡಿಸಲಾಗಿದೆ.