
ನೆಲಮಂಗಲ: ಈರುಳ್ಳಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಟ್ರಕ್ ಗೆ ಟೆಂಪೋ ಡಿಕ್ಕಿ ಹೊಡೆದ ಪಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ನಡೆದಿದೆ.
ಅಪಘಾತದಲ್ಲಿ ಚಿತ್ರದುರ್ಗ ಜಿಲ್ಲೆಯ ಗಂಗಾಧರಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓಬಣ್ಣ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ
ಈರುಳ್ಳಿ ತುಂಬಿಕೊಂಡು ಬಂದಿದ್ದ ಗಂಗಾಧರಪ್ಪ, ಬೆಂಗಳೂರಿನ ಯಶವಂತಪುರ ಎಪಿಎಂಸಿಗೆ ಬರುತ್ತಿದರು. ಈ ವೇಳೆ ಟ್ರಕ್ ಕೆಟ್ಟು ಹೋಗಿ ಅಂಚೇಪಾಳ್ಯದ ಬಳಿ ರಸ್ತೆಬದಿ ನಿಲ್ಲಿಸಿದ್ದರು. ಈ ವೇಳೆ ಹಿಂದಿನಿಂದ ಬಂದ ಟೆಂಪೋ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಗಂಗಾಧರಪ್ಪ ಸಾವನ್ನಪ್ಪಿದ್ದಾರೆ.
ಈರುಳ್ಳಿ ರಸ್ತೆ ತುಂಬೆಲ್ಲ ಚಲ್ಲಾಪಿಲ್ಲಿಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.