alex Certify ಪಶ್ಚಿಮ ಘಟ್ಟದಲ್ಲಿ ಎಲ್ಲಾ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಶ್ಚಿಮ ಘಟ್ಟದಲ್ಲಿ ಎಲ್ಲಾ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ

ಬೆಂಗಳೂರು: ಪಶ್ಚಿಮ ಘಟ್ಟ ಸಂರಕ್ಷಣೆ ನಿಟ್ಟಿನಲ್ಲಿ ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸಚಿವರು ಸೂಚನೆ ನೀಡಿದ್ದು, ಅನೇಕ ನದಿಗಳ ಮೂಲ ಮತ್ತು ಜೀವವೈವಿಧ್ಯ ತಾಣವಾಗಿರುವ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ ಈ ಪ್ರದೇಶದ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರಿಗೆ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ತಿಳಿಸಿದ್ದಾರೆ.

ಕೊಡಗಿನ ಭೂಕುಸಿತ ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ, ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದೆ. ಇತ್ತೀಚೆಗೆ ಗುಡ್ಡ ಕುಸಿತ, ಭೂ ಕುಸಿತ ಹೆಚ್ಚಾಗುತ್ತಿರುವ ಪಶ್ಚಿಮ ಘಟ್ಟದಲ್ಲಿ ಸಂಭಾವ್ಯ ಅವಘಡ ತಡೆಯಲು ಮುಂಜಾಗ್ರತೆ ಕ್ರಮವಾಗಿ ಒತ್ತುವರಿ ತೆರವಿಗೆ ಕ್ರಮ ವಹಿಸಲಾಗಿದೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಭೂ ಉಪಯೋಗದ ರೀತಿ ಮತ್ತು ಭೂ ಪರಿವರ್ತನೆ ಸೇರಿ ಕಟ್ಟಡ ನಿರ್ಮಾಣಕ್ಕೆ ಕಂದಾಯ, ನಗರಾಭಿವೃದ್ಧಿ, ಪೌರಾಡಳಿತ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದಲ್ಲಿ ಉಪಯೋಗ ಸ್ವರೂಪ ಕುರಿತಾಗಿ ಹೊಸ ಪ್ರಾದೇಶಿಕ ನಿಯಂತ್ರಣ ಮತ್ತು ಮಾಸ್ಟರ್ ಯೋಜನೆ ರೂಪಿಸುವವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆ ತಾತ್ಕಾಲಿಕವಾಗಿ ತಡೆಹಿಡಿಯಲು ಕ್ರಮವಹಿಸುವಂತೆ ಸೂಚಿಸಿದ್ದಾರೆ.

ಅತಿ ಜರೂರಾದ ಮತ್ತು ಸಾರ್ವಜನಿಕ ಮಹತ್ವದ ಪ್ರಕರಣಗಳಲ್ಲಿ ಮಾತ್ರ ಯೋಜನೆಗೆ ಪರಿಸರ ಸಮ್ಮತಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖೆ ಹಿರಿಯ ಅಧಿಕಾರಿಗಳು, ತಜ್ಞರ ಸಮಿತಿಯ ಉನ್ನತಾಧಿಕಾರ ಸಮಿತಿ ಸಭೆಯ ಅನುಮೋದನೆ ನಂತರವಷ್ಟೇ ನೀಡುವುದು ಸೂಕ್ತವೆಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...