ತುಮಕೂರು: ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕಾಮಗಾರಿ ಟೆಂಡರ್ ನಲ್ಲಿ ಅನ್ಯಾಯ ಖಂಡಿಸಿ ಗುರುವಾರ ರಾತ್ರಿ ಲೋಕೋಪಯೋಗಿ ಇಲಾಖೆ ಕಚೇರಿ ಎದುರು ಕಾಂಗ್ರೆಸ್ ಮುಖಂಡ ರಾಯಸಂದ್ರ ರವಿಕುಮಾರ್ ಧರಣಿ ನಡೆಸಿದ್ದಾರೆ. ಪ್ರತಿಭಟನೆ ಕೈಗೊಂಡಿದ್ದ ರವಿಕುಮಾರ್ ಮೇಲೆ ಶಾಸಕ ಎಸ್.ಆರ್. ಶ್ರೀನಿವಾಸ್ ಮತ್ತು ಸಹಚರರು ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ. ರವಿಕುಮಾರ್ ದೂರಿನ ಮೇರೆಗೆ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.