ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಬೂದಿಮುಚ್ಚಿದ ಕೆಂಡದಂತಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಇದೀಗ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಸಿಕ್ಕ ಸಿಕ್ಕಲ್ಲಿ ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ನಿಷೇಧಾಜ್ಞೆ ನಡುವೆಯೂ ಭಜರಂಗದಳ ಕಾರ್ಯಕರ್ತ ಮೃತ ಹರ್ಷ ಮೃತದೇಹದ ಮೆರವಣಿಗೆ ನಡೆದಿದ್ದು, ಮೆಗ್ಗಾನ್ ಆಸ್ಪತ್ರೆಯಿಂದ ಹರ್ಷ ನಿವಾಸ ಬಸವನ ಬೀದಿಯಲ್ಲಿರುವ ಮನೆವರೆಗೆ ಮೆರವಣಿಗೆ ನಡೆಸಲಾಗಿದ್ದು, ಈ ವೇಳೆ ಉದ್ರಿಕ್ತರ ಗುಂಪೊಂದು ಎನ್.ಟಿ.ರಸ್ತೆಯಲ್ಲಿ ಕಲ್ಲು ತೂರಾಟ ನಡೆಸಿದೆ. ಇದಾದ ಕೆಲವೇ ಸಮಯದಲ್ಲಿ ಇದೀಗ ಶಿವಮೊಗ್ಗದ ಆಜಾದ್ ನಗರ ಸೇರಿದಂತೆ ಹಲವೆಡೆಗಳಲ್ಲಿ ಉದ್ರಿಕ್ತರ ಗುಂಪು ಮನೆಗಳ ಮೇಲೆ, ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ್ದಲ್ಲದೇ, ರಸ್ತೆ ಪಕ್ಕದಲ್ಲಿ ನಿಂತಿದ್ದ ಬೈಕ್, ಕಾರು ಸೇರಿದಂತೆ ಸಿಕ್ಕ ಸಿಕ್ಕ ವಾಹನಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಕ್ರೇನ್ ಗಡಿಯಲ್ಲಿ ರಷ್ಯಾದಿಂದ ಸೇನಾಪಡೆ ನಿಯೋಜನೆ…! ಉಪಗ್ರಹ ಫೋಟೋದಿಂದ ಬಹಿರಂಗ
ಉದ್ರಿಕ್ತರ ಅಟ್ಟಹಾಸಕ್ಕೆ ಎರಡು ಬೈಕ್ ಗಳು ಬೆಂಕಿಗಾಹುತಿಯಾಗಿದ್ದು, 3-4 ಓಮ್ನಿ ವಾಹನಗಳ ಗಾಜು ಪುಡಿ ಪುಡಿಯಾಗಿವೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡುತ್ತಿದ್ದು, ಶಿವಮೊಗ್ಗದಾದ್ಯಂತ ಜನತೆ ಭಯಭೀತರಾಗಿದ್ದು ಜೀವಭಯದಲ್ಲಿ ಕಾಲಕಳೆಯುತ್ತಿದ್ದಾರೆ.