alex Certify ಔರಂಗಜೇಬ್ – ಟಿಪ್ಪು ಸುಲ್ತಾನ್ ಪರ ಪೋಸ್ಟ್; ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಔರಂಗಜೇಬ್ – ಟಿಪ್ಪು ಸುಲ್ತಾನ್ ಪರ ಪೋಸ್ಟ್; ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

ಸಾಮಾಜಿಕ ಮಾಧ್ಯಮಗಳಲ್ಲಿ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಅವರ ಪರ ಹಾಕಿದ್ದ ವಿವಾದಾತ್ಮಕ ಪೋಸ್ಟ್ ಗಳನ್ನು ವಿರೋಧಿಸಿ ಕೆಲ ಹಿಂದೂ ಸಂಘಟನೆಗಳು ಬುಧವಾರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿವೆ.

ಪೋಸ್ಟ್ ವಿರೋಧಿಸಿ ಬಂದ್ ಗೆ ಕರೆ ನೀಡಿದ್ದ ಸಂಘಟನೆಗಳು ಇದು ಇಬ್ಬರು ಆಡಳಿತಗಾರರನ್ನು ವೈಭವೀಕರಿಸುವ ಉದ್ದೇಶ ಹೊಂದಿವೆ ಎಂದು ಆರೋಪಿಸಿದರು.

ಕೊಲ್ಹಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್‌ನಲ್ಲಿ ಪ್ರತಿಭಟನಾಕಾರರು ಕೆಲವು ಅಂಗಡಿಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಿದಾಗ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಪೋಸ್ಟ್ ಹಾಕಿದವರ ವಿರುದ್ಧ ಅವರು ಕ್ರಮಕ್ಕೆ ಒತ್ತಾಯಿಸಿದರು.

ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಪಟ್ಟಣದ ಇತರೆಡೆಯಿಂದಲೂ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಬಗ್ಗೆ ವರದಿಯಾಗಿದೆ.

“ಕೆಲವು ಸಂಘಟನೆಗಳು ಕೊಲ್ಹಾಪುರ ಬಂದ್‌ಗೆ ಕರೆ ನೀಡಿದ್ದವು ಮತ್ತು ಈ ಸಂಘಟನೆಗಳ ಸದಸ್ಯರು ಶಿವಾಜಿ ಚೌಕ್‌ನಲ್ಲಿ ಜಮಾಯಿಸಿದರು. ಕೆಲವರು ಕಲ್ಲು ತೂರಾಟ ನಡೆಸಿದರು. ಈ ಜನರನ್ನು ಚದುರಿಸಲು ಬಲಪ್ರಯೋಗ ಮಾಡಬೇಕಾಯಿತು” ಎಂದು ಕೊಲ್ಲಾಪುರದ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪಂಡಿತ್ ಹೇಳಿದರು. .

ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ. ಅಲ್ಲದೆ ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

ಗೃಹ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...