alex Certify BREAKING NEWS: ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರ ಅವಧಿ 1 ತಿಂಗಳು ವಿಸ್ತರಣೆ, ಕುತೂಹಲ ಮೂಡಿಸಿದ ಸರ್ಕಾರದ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರ ಅವಧಿ 1 ತಿಂಗಳು ವಿಸ್ತರಣೆ, ಕುತೂಹಲ ಮೂಡಿಸಿದ ಸರ್ಕಾರದ ನಡೆ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ಮತ್ತೆ ವಿಸ್ತರಣೆ ಮಾಡಲಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಫೆಬ್ರವರಿ 29ರ ವರೆಗೆ ಅಧ್ಯಕ್ಷರ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಜನವರಿ 31ರವರೆಗೆ ಜಯಪ್ರಕಾಶ್ ಹೆಗಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿಯನ್ನು ವಿಸ್ತರಿಸಲಾಗಿತ್ತು. ಈಗ ಮತ್ತೆ ಒಂದು ತಿಂಗಳ ಅವಧಿಗೆ ವಿಸ್ತರಿಸಿದೆ.

ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕರಿಸುವ ವಿಚಾರವಾಗಿ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಇದೇ ಸಂದರ್ಭದಲ್ಲಿ ಅವಧಿ ವಿಸ್ತರಿಸುವ ಸರ್ಕಾರದ ನಡೆ ಕುತೂಹಲ ಮೂಡಿಸಿದೆ.

ಕಳೆದ ನವಂಬರ್ ನಲ್ಲೇ ಜಯಪ್ರಕಾಶ್ ಹೆಗಡೆ ಅವರ ಅಧಿಕಾರದ ಅವಧಿ ಪೂರ್ಣಗೊಂಡಿತ್ತು. ಜನವರಿ 31ರವರೆಗೂ ಸರ್ಕಾರ ವಿಸ್ತರಿಸಿತ್ತು. ಈಗ ಆಯೋಗದಿಂದ ವರದಿ ಸ್ವೀಕರಿಸುವ ಹಿನ್ನೆಲೆಯಲ್ಲಿ ಫೆಬ್ರವರಿ 29ರವರೆಗೂ ವಿಸ್ತರಿಸಲಾಗಿದೆ. ಚಿತ್ರದುರ್ಗದಲ್ಲಿ ಇತ್ತೀಚೆಗೆ ನಡೆದ ಶೋಷಿತ ವರ್ಗದ ಜಾಗೃತಿ ಸಮಾವೇಶದಲ್ಲಿ ಕಾಂತರಾಜು ವರದಿ ಸ್ವೀಕರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...