ಬೆಂಗಳೂರು : ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಉಲ್ಲಾಳ ಕೆರೆ ಬಳಿ ನಡೆದಿದೆ.
ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಲಿಖಿತ್ ಎಂದು ಗುರುತಿಸಲಾಗಿದೆ. ಟಿಪ್ಪರ್ ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿ ಬೈಕ್ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ಲಿಖಿತ್ ಮೇಲೆ ಲಾರಿ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಜ್ಞಾನೇಶ್ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.