ಮಧ್ಯಪ್ರದೇಶ : ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ಎಸ್ ಯುವಿ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸನೋಧಾ ಪೊಲೀಸ್ ಠಾಣೆ ಪ್ರದೇಶದ ಸನೋಧಾ ಜಟಾಶಂಕರ್ ಕಣಿವೆಯ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕಾರಿನಲ್ಲಿ ಏಳು ಜನರಿದ್ದರು. ಅವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಗಾಯಗೊಂಡವರಲ್ಲಿ ಒಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಸ್ಪಿ ಅಭಿಷೇಕ್ ತಿವಾರಿ ಎಎನ್ಐಗೆ ತಿಳಿಸಿದ್ದಾರೆ. ಅಪಘಾರ ಬಳಿಕ ಟ್ರಕ್ ಚಾಲಕ ನಾಪತ್ತೆಯಾಗಿದ್ದು , ಆತನನ್ನು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.