ಜಮ್ಮು-ಕಾಶ್ಮೀರದಲ್ಲಿ ಭೀಕರ ಬಸ್ ದುರಂತ ಸಂಭವಿಸಿದ್ದು, 36 ಮಂದಿ ಮೃತಪಟ್ಟಿದ್ದಾರೆ.ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತವು ದುಃಖಕರವಾಗಿದೆ. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.