ತೈವಾನ್ನಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 7.4 ರಷ್ಟು ಭೂಕಂಪ ಸಂಭವಿಸಿದ ನಂತರ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
1999ರಲ್ಲಿ ತೈವಾನ್ ನ ನಂಟೌ ಕೌಂಟಿಯಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿ 2,500ಕ್ಕೂ ಹೆಚ್ಚು ಮಂದಿ ಮೃತಪಟ್ಟು, 1,300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇಂದು ತೈವಾನ್ನಲ್ಲಿ ಬುಧವಾರ ರಿಕ್ಟರ್ ಮಾಪಕದಲ್ಲಿ 7.4 ರಷ್ಟು ಭೂಕಂಪ ಸಂಭವಿಸಿದ ನಂತರ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ.
ಭಾರಿ ಭೂಕಂಪದ ಪರಿಣಾಮವಾಗಿ ತೈವಾನ್ನಲ್ಲಿ ಕನಿಷ್ಠ 26 ಕಟ್ಟಡಗಳು ಕುಸಿದಿವೆ, ಅವುಗಳಲ್ಲಿ ಅರ್ಧಕ್ಕಿಂತ ಹೆಚ್ಚು ಕೌಂಟಿಯಲ್ಲಿವೆ ಎಂದು ಸರ್ಕಾರ ಹೇಳಿದೆ.ಏತನ್ಮಧ್ಯೆ, ಕುಸಿದ ಕಟ್ಟಡಗಳ ಅವಶೇಷಗಳಲ್ಲಿ ಸಿಲುಕಿರುವ ಸುಮಾರು 20 ಜನರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ.ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಭೂಕಂಪದ ತೀವ್ರತೆ 7.4 ಎಂದು ಹೇಳಿದರೆ, ತೈವಾನ್ನ ಭೂಕಂಪ ಮೇಲ್ವಿಚಾರಣಾ ಸಂಸ್ಥೆ ರಿಕ್ಟರ್ ಮಾಪಕದಲ್ಲಿ 7.2 ರಷ್ಟಿದೆ ಎಂದು ಹೇಳಿದೆ.