ಬೀಜಿಂಗ್: ಚೀನಾದ ಹೆನಾನ್ ಪ್ರಾಂತ್ಯದ ಶಾಲಾ ವಸತಿ ನಿಲಯದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿದೆ.
ಮಧ್ಯ ಚೀನಾದ ಹೆನಾನ್ ಪ್ರಾಂತ್ಯದ ನನ್ಯಾಂಗ್ನ ಯಾನ್ಶಾನ್ಪು ಗ್ರಾಮದ ಯಿಂಗ್ಕೈ ಶಾಲೆಯ ವಸತಿ ನಿಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಾಯಗಳಾಗಿವೆ. ಸದ್ಯ ಶಾಲೆಯ ವ್ಯವಸ್ಥಾಪಕರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.