ಲೋಹರ್ದಗಾ : ಜಾರ್ಖಂಡ್ ನ ಲೋಹರ್ದಗಾ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕುಡು ಪ್ರದೇಶದ ತಾಟಿ ಗ್ರಾಮದ ಬಳಿ ಬಸ್-ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ತಿಂಗಳಿನಿಂದ ಆರು ವರ್ಷದೊಳಗಿನ ಮಕ್ಕಳು ಮೃತಪಟ್ಟಿದ್ದಾರೆ.
ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 60 ಕಿ.ಮೀ ದೂರದಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಟ್ರಕ್ ಚಾಲಕ ಸೇರಿದಂತೆ ಇತರ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಗೆ ಕಳುಹಿಸಲಾಗಿದೆ ಎಂದು ಕುಡು ಪೊಲೀಸ್ ಠಾಣೆಯ ಉಸ್ತುವಾರಿ ಕುಲದೀಪ್ ರಾಜ್ ಟೊಪ್ಪೊ ತಿಳಿಸಿದ್ದಾರೆ. ರಾಂಚಿ ಜಿಲ್ಲೆಯ ಬೊರಿಯಾ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.