
ಚಲಿಸುತ್ತಿದ್ದ ಬೈಕಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ಬೈಕ್ ನಿಲ್ಲಿಸಿ ನಂದಿಸಲು ಹೋದ ವೇಳೆ ಟ್ಯಾಂಕ್ ಸ್ಫೋಟಗೊಂಡಿದೆ.
ತೆಲಂಗಾಣ ರಾಜಧಾನಿ ಹೈದರಾಬಾದಿನ ಪಾತಬಸ್ತಿಯ ಭವಾನಿ ನಗರದ ಮುಘಲ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತನ್ನ ಬೈಕಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ನಂದಿಸಲು ಮುಂದಾಗಿದ್ದಾನೆ.
ಇದನ್ನು ಗಮನಿಸಿದ ಸ್ಥಳೀಯರು ಸಹ ಸಹಾಯಕ್ಕೆ ಬಂದಿದ್ದು, ನೀರು ಚಿಮುಕಿಸಿ ಬೆಂಕಿ ನಂದಿಸಲು ಹೋದ ವೇಳೆ ಟ್ಯಾಂಕ್ ಸ್ಫೋಟಗೊಂಡಿದೆ. ಇದರ ಪರಿಣಾಮ 10 ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಯಾವ ಕಾರಣಕ್ಕೆ ಬೈಕಿಗೆ ಬೆಂಕಿ ತಗುಲಿದೆ ಎಂಬುದರ ಪರಿಶೀಲನೆ ನಡೆಸಿದ್ದಾರೆ.