alex Certify BREAKING NEWS: ಶಂಕಿತ ಉಗ್ರ ಮಾಜ್ ತಂದೆ ಹೃದಯಾಘಾತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಂಕಿತ ಉಗ್ರ ಮಾಜ್ ತಂದೆ ಹೃದಯಾಘಾತದಿಂದ ಸಾವು

ಶಿವಮೊಗ್ಗ : ಶಂಕಿತ ಉಗ್ರ ಮಾಜ್ ತಂದೆ ಹೃದಯಘಾತದಿಂದ ಮೃತಪಟ್ಟಿದ್ದಾರೆ. 57 ವರ್ಷದ ಮುನೀರ್ ಅಹ್ಮದ್ ಮೃತಪಟ್ಟವರು ಎಂದು ಹೇಳಲಾಗಿದೆ.

ಹೃದಯಾಘಾತವಾಗಿದ್ದರಿಂದ ಮುನೀರ್ ಅಹ್ಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಮುನೀರ್ ಅವರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಮಂಗಳೂರಿನಲ್ಲಿ ನೆಲೆಸಿದ್ದರು.

ಐಸಿಸ್ ಉಗ್ರ ಸಂಘಟನೆಯ ಜೊತೆಗೆ ಸಂಪರ್ಕ ಹೊಂದಿದ ಶಂಕೆಯ ಮೇಲೆ ಮಾಜ್ ನನ್ನು ಬಂಧಿಸಲಾಗಿದೆ. ಉಗ್ರ ಸಂಘಟನೆಯೊಂದಿಗೆ ಪುತ್ರನ ಸಂಪರ್ಕ ಇರುವುದನ್ನು ತಿಳಿದ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...