
ನವದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮ ವೇಳೆ ಉಗ್ರರ ದಾಳಿ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗೃಹ ಇಲಾಖೆ ವತಿಯಿಂದ ಎಲ್ಲಾ ರಾಜ್ಯಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದಿಂದ ಈ ಬಗ್ಗೆ ಮಹತ್ವದ ಸೂಚನೆ ನೀಡಲಾಗಿದ್ದು, ಜನವರಿ 26 ರಂದು ದೇಶದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವೇಳೆ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ರಾಜ್ಯಗಳಿಗೂ ಸೂಚನೆ ನೀಡಲಾಗಿದೆ.