alex Certify ಉಗ್ರರ ಸದೆಬಡಿಯುವ ಕಾರ್ಯಾಚರಣೆಯಲ್ಲಿ ಭಾರಿ ಯಶಸ್ಸು: ಮತ್ತೆ ಮೂವರು ಸೇರಿ 36 ಗಂಟೆಯಲ್ಲಿ 9 ಉಗ್ರರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಗ್ರರ ಸದೆಬಡಿಯುವ ಕಾರ್ಯಾಚರಣೆಯಲ್ಲಿ ಭಾರಿ ಯಶಸ್ಸು: ಮತ್ತೆ ಮೂವರು ಸೇರಿ 36 ಗಂಟೆಯಲ್ಲಿ 9 ಉಗ್ರರ ಹತ್ಯೆ

ಶ್ರೀನಗರ: ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಕಳೆದ 36 ಗಂಟೆಗಳ ಅವಧಿಯಲ್ಲಿ ಸೇನೆಯಿಂದ 9 ಉಗ್ರರನ್ನು ಹತ್ಯೆಗೈಯಲಾಗಿದೆ. ಉಗ್ರರ ವಿರುದ್ಧದ ಹೋರಾಟದಲ್ಲಿ ಸೇನೆಗೆ ಭಾರಿ ಯಶಸ್ಸು ಸಿಕ್ಕಿದೆ.

ನಿನ್ನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ ಕೌಂಟರ್‌ ಗಳಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್(ಜೆಇಎಂ) ಗೆ ಸೇರಿದ ಆರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಇವರಲ್ಲಿ ಇಬ್ಬರು ಪಾಕಿಸ್ತಾನಿ ಹಾಗೂ ಇಬ್ಬರು ಸ್ಥಳೀಯ ಭಯೋತ್ಪಾದಕರು ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...