ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಜಮ್ಮು ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಕಾಶ್ಮೀರಿ ಪಂಡಿತರನ್ನು ಕೊಂದ ಭಯೋತ್ಪಾದಕ ಸೇರಿದಂತೆ 3 ಮಂದಿ ಹತ್ಯೆ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆಗಳು ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ(ಎಲ್ಇಟಿ) ನೊಂದಿಗೆ ಸಂಪರ್ಕ ಹೊಂದಿದ್ದ ಮೂವರು ಸ್ಥಳೀಯ ಭಯೋತ್ಪಾದಕರನ್ನು ಹೊಡೆದುರುಳಿದ್ದಾರೆ.
ಇಬ್ಬರು ಉಗ್ರರನ್ನು ಲತೀಫ್ ಲೋನ್ ಮತ್ತು ಉಮರ್ ನಜೀರ್ ಎಂದು ಪೊಲೀಸರು ಗುರುತಿಸಿದ್ದಾರೆ. ಕಾಶ್ಮೀರಿ ಪಂಡಿತ್ ಪುರಾಣ ಕೃಷ್ಣ ಭಟ್ ಹತ್ಯೆಯಲ್ಲಿ ಲೋನ್ ಭಾಗಿಯಾಗಿದ್ದರೆ, ನೇಪಾಳದ ಟಿಲ್ ಬಹದ್ದೂರ್ ಥಾಪಾ ಹತ್ಯೆಯಲ್ಲಿ ಅನಂತನಾಗ್ ನ ಉಮರ್ ನಜೀರ್ ಭಾಗಿಯಾಗಿದ್ದಾನೆ. ಒಂದು ಎಕೆ-47 ರೈಫಲ್ ಮತ್ತು ಎರಡು ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರದ ಎಡಿಜಿಪಿ ಹೇಳಿದ್ದಾರೆ.