![](https://kannadadunia.com/wp-content/uploads/2021/12/terror-crpf-army.png)
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ನಾಗರೀಕರನ್ನು ಗುರಿಯಾಗಿಸಿಕೊಂಡು ಮತ್ತೆ ಗುಂಡಿನ ದಾಳಿ ನಡೆಸಲಾಗಿದೆ.
ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದು, ಪ್ರಾಪರ್ಟಿ ಡೀಲರ್ ನನ್ನು ಹತ್ಯೆ ಮಾಡಿದ್ದಾರೆ. ಶ್ರೀನಗರದ ಮೆರ್ಜನ್‌ಪೋರಾ, ಈದ್ಗಾ, ಪಿಎಸ್ ಸಫಕದಲ್ ಎಂಬಲ್ಲಿ ಭಯೋತ್ಪಾದಕರು ರೂಫ್ ಅಹ್ಮದ್ ಎಂಬ ನಾಗರಿಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗಾಯಾಳುವನ್ನು ಎಸ್‌ಎಂಹೆಚ್‌ಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಅನಂತನಾಗ್‌ನ ಪಿಎಸ್ ಬಿಜ್ ಬೆಹರಾದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಫೈರಿಂಗ್ ಮಾಡಲಾಗಿದ್ದು, ಎಎಸ್‌ಐ ಮೊಹಮ್ಮದ್ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇವಲ ಒಂದು ಗಂಟೆ ಅವಧಿಯಲ್ಲಿ ಉಗ್ರರು ಎರಡು ಕಡೆ ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿನ ಪ್ರದೇಶ ಸುತ್ತುವರಿದ CRPF, ಕಾಶ್ಮೀರ ವಲಯ ಪೊಲೀಸರು ಉಗ್ರರ ಬೇಟೆಗೆ ಬಲೆ ಬೀಸಿದ್ದಾರೆ.