alex Certify BREAKING NEWS: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್, ಮತ್ತಿಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್, ಮತ್ತಿಬ್ಬರು ಅರೆಸ್ಟ್

ಶ್ರೀನಗರ: ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದಿದೆ.

ಶೋಪಿಯಾನ್ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಮುಖಾಮುಖಿಯಾದ ವೇಳೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾಪಡೆಗಳು ಕಾರ್ಯಾಚರಣೆ ತೀವ್ರಗೊಳಿಸಿ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸದೆಬಡಿದಿವೆ.

ಮೃತಪಟ್ಟವರು ಲಷ್ಕರ್ ಎ ತೊಯ್ಬಾ ಸಂಘಟನೆಗೆ ಸೇರಿದವರಾಗಿದ್ದಾರೆ. ಘಟನಾ ಸ್ಥಳದಲ್ಲಿ ಇಬ್ಬರು ಭಯೋತ್ಪಾದಕರನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನೂ ಹಲವು ಭಯೋತ್ಪಾದಕರು ಅವಿತಿರುವ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ಐಜಿ ವಿಜಯ್ ಕುಮಾರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...