
ಪುಲ್ವಾಮದಲ್ಲಿ ಭಯೋತ್ಪಾದಕರು ಕಾಶ್ಮೀರಿ ಪಂಡಿತ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಜಯ್ ಶರ್ಮಾ ಎಂಬವರು ಪುಲ್ವಾಮಾದ ಸ್ಥಳೀಯ ಮಾರುಕಟ್ಟೆಗೆ ತೆರಳುವಾಗ ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದರ ಪರಿಣಾಮ ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಹಿಂದೆಯೂ ಹಲವು ಕಾಶ್ಮೀರ ಪಂಡಿತರನ್ನು ಉಗ್ರರು ಹತ್ಯೆ ಮಾಡಿದ್ದರು. ಹೀಗಾಗಿ ತಮಗೆ ಸೂಕ್ತ ರಕ್ಷಣೆ ನೀಡಬೇಕೆಂದು ಕಾಶ್ಮೀರಿ ಪಂಡಿತ್ ಸಮುದಾಯ ಪ್ರತಿಭಟನೆ ನಡೆಸಿತ್ತು.