alex Certify BREAKING NEWS: ಮತ್ತೆ ಮೂವರು ಉಗ್ರರು ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮತ್ತೆ ಮೂವರು ಉಗ್ರರು ಫಿನಿಶ್

ಶ್ರೀನಗರ: ಭಾರತೀಯ ಸೇನೆ ಮತ್ತೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನೆಯಿಂದ ಮಹತ್ವದ ಕಾರ್ಯಾಚರಣೆ ನಡೆಸಲಾಗಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ.

ಕುಲ್ಗಾಂನಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಪಡೆದ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಳ ಸುತ್ತುವರೆದು ವಾರ್ನಿಂಗ್ ಮಾಡಿದ್ದಾರೆ. ಈ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ಫೈರಿಂಗ್ ನಲ್ಲಿ ಮೂವರು ಉಗ್ರರನ್ನು ಸದೆಬಡಿದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಸದೆಬಡಿಯಲು ಭಾರತೀಯ ಸೇನೆಯಿಂದ ನಿರಂತರ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಎರಡು ದಿನದ ಹಿಂದೆ ಉಗ್ರರಿಗೆ ನೆರವು ನೀಡುತ್ತಿದ್ದ, ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಉದ್ಯಮಿಗಳನ್ನು ಸದೆಬಡಿಯಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...