ತುಮಕೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಯನ್ನು ಆರು ತಿಂಗಳಿಗೆ ಒಮ್ಮೆ ನಡೆಸಲು ಚಿಂತನೆ ನಡೆದಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಆರು ತಿಂಗಳಿಗೊಮ್ಮೆ ಟಿಇಟಿ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ. ನಿಗದಿತ ದಿನಾಂಕದಂದು ಆರು ತಿಂಗಳಿಗೊಮ್ಮೆ ಪರೀಕ್ಷೆ ನಡೆಸುವುದರಿಂದ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗಲಿದೆ. ಹಾಗಾಗಿ 6 ತಿಂಗಳಿಗೊಮ್ಮೆ ನಿಗದಿತ ದಿನಾಂಕದಂದು ಟಿಇಟಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.