alex Certify ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ನ. 6 ರಂದು ಟಿಇಟಿ ಪರೀಕ್ಷೆ ಫುಲ್ ಟೈಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ನ. 6 ರಂದು ಟಿಇಟಿ ಪರೀಕ್ಷೆ ಫುಲ್ ಟೈಟ್

ಬೆಂಗಳೂರು: ನ. 6 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಸಂಪೂರ್ಣ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅಭ್ಯರ್ಥಿಗಳು ಪರೀಕ್ಷೆ ಆರಂಭದ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು. ಪರೀಕ್ಷೆ ಆರಂಭಿಸುವ ಅರ್ಧ ಗಂಟೆ ಮೊದಲು ಪರೀಕ್ಷಾ ಕೇಂದ್ರದ ಬಾಗಿಲು ಬಂದ್ ಮಾಡಲಾಗುವುದು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ, ಪರೀಕ್ಷಾ ಕೊಠಡಿ ಪ್ರವೇಶ, ಓಎಂಆರ್ ಶೀಟ್ ವಿತರಣೆ ಸೇರಿದಂತೆ ಪ್ರತಿಯೊಂದು ಸಮಯ ನಿಗದಿ ಮಾಡಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.

ಎಲ್ಲಾ ಅಭ್ಯರ್ಥಿಗಳನ್ನು ತಪಾಸಣೆಗೆ ಒಳಪಡಿಸುವ ಕಾರಣ ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಬರಬೇಕು. ಬೆಳಗಿನ ಪರೀಕ್ಷೆಗೆ 9 ಗಂಟೆಗೆ, ಮಧ್ಯಾಹ್ನದ ಪರೀಕ್ಷೆಗೆ 1.30 ನಿಮಿಷಕ್ಕೆ ಹಾಜರಿರಬೇಕು.

ಕೈಗಡಿಯಾರ, ಕ್ಯಾಲ್ಕುಲೇಟರ್, ಮೊಬೈಲ್, ಬ್ಲೂಟೂತ್ ಇತರೆ ಎಲೆಕ್ಟ್ರಾನಿಕ್ ಉಪಕರಣಗಳು, ಬೆಂಕಿ ಪೊಟ್ಟಣ, ಸಿಗರೇಟ್ ಲೈಟರ್ ಮೊದಲಾದ ವಸ್ತುಗಳನ್ನು ತರುವಂತಿಲ್ಲ.

ಪರೀಕ್ಷೆ ಆರಂಭವಾದ ನಂತರ ಯಾರಿಗೂ ಒಳಗೆ ಪ್ರವೇಶ ಇರುವುದಿಲ್ಲ. ಪರೀಕ್ಷೆ ಮುಗಿಯುವವರೆಗೂ ಯಾರಿಗೂ ಹೊರಗೆ ಹೋಗಲು ಅವಕಾಶ ಇರುವುದಿಲ್ಲ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...