ನವದೆಹಲಿ: ಶಿಕ್ಷಕರ ಅರ್ಹತಾ ಪರೀಕ್ಷೆ ಮಾನ್ಯತೆಯನ್ನು 7 ವರ್ಷದಿಂದ ಜೀವಿತಾವಧಿಯವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
2011 ರಿಂದಲೇ ಅನ್ವಯವಾಗುವಂತೆ ಟಿಇಟಿ ಮಾನ್ಯತೆ ವಿಸ್ತರಣೆಗೆ ಕ್ರಮಕೈಗೊಳ್ಳಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು, ಈ ಬಗ್ಗೆ ಮಾಹಿತಿ ನೀಡಿದ್ದು, ಟಿಇಟಿ ಮಾನ್ಯತೆಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಅರ್ಹ ಶಿಕ್ಷಕ ಅಭ್ಯರ್ಥಿಗಳಿಗೆ ಹೊಸ ಪ್ರಮಾಣಪತ್ರಗಳನ್ನು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸಲಿದ್ದು, ಉದ್ಯೋಗವಕಾಶ ಹೆಚ್ಚಳಕ್ಕೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಅಂದ ಹಾಗೆ, ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ಸ್ ಎಎಜುಕೇಷನ್ 2011 ರಲ್ಲಿ ಶಿಕ್ಷಕರ ನೇಮಕಾತಿ ಸಂದರ್ಭದಲ್ಲಿ ಅಭ್ಯರ್ಥಿಗಳು ಟಿಇಟಿ ಪ್ರಮಾಣ ಪತ್ರ ಹೊಂದಿರುವುದು ಅವಶ್ಯಕ ಎಂದು ಮಾರ್ಗಸೂಚಿ ಹೊರಡಿಸಿದೆ. ಈ ಪ್ರಮಾಣ ಪತ್ರದ ಮಾನ್ಯತೆಯನ್ನು 7 ವರ್ಷದಿಂದ ಜೀವಿತಾವಧಿಯವರೆಗೆ ವಿಸ್ತರಿಸಲಾಗಿದೆ.