alex Certify ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ನ. 6 ರಂದು KAR -TET | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ನ. 6 ರಂದು KAR -TET

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2022 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್‌ -ಟಿಇಟಿ) ನವೆಂಬರ್ 6 ರಂದು ನಡೆಸಲಾಗುವುದು.

ಒಂದರಿಂದ ಐದನೇ ತರಗತಿವರೆಗೆ ಪಾಠ ಮಾಡುವ ಶಿಕ್ಷಕರಿಗೆ ಪತ್ರಿಕೆ -1 ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.

ಆರರಿಂದ ಎಂಟನೇ ತರಗತಿಗೆ ಪಾಠ ಮಾಡುವ ಶಿಕ್ಷಕರಿಗೆ ಪತ್ರಿಕೆ -2 ಮಧ್ಯಾಹ್ನ 2 ರಿಂದ ಸಂಜೆ 4:30ರ ವರೆಗೆ ಪರೀಕ್ಷೆ ನಡೆಯಲಿದೆ.

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, ಅಕ್ಟೋಬರ್ 21 ರಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಕೆ ಮತ್ತು ವಿವರಗಳಿಗಾಗಿ schooleducation.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...