ಕಲಬುರ್ಗಿ: ಈ ಬಾರಿ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಕಲಬುರ್ಗಿಯ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ ಈ ಬಾರಿ ಎರಡರಿಂದ ಮೂರು ಸಲ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಶಿಕ್ಷಕರ ಹುದ್ದೆ ನೇಮಕಾತಿ ಪರೀಕ್ಷೆ ಬರೆಯುವವರು ಅರ್ಹತೆ ಗಳಿಸಲು ಶಿಕ್ಷಕರ ಅರ್ಹತಾ ಪರೀಕ್ಷೆ ಪಾಸಾಗಿರಬೇಕು. ಈ ಹಿಂದೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದ ಸಂದರ್ಭದಲ್ಲಿ ಕೇವಲ 2500 ಜನರು ಮಾತ್ರ ಪಾಸಾಗಿದ್ದರು. ಈ ಬಾರಿ 5000 ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಇದಕ್ಕಾಗಿ ಎರಡರಿಂದ ಮೂರು ಬಾರಿ ನೇಮಕಾತಿ ಪರೀಕ್ಷೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ.