ಬೆಂಗಳೂರು: ಪಠ್ಯದಲ್ಲಿರುವ ಬಾಬಾಬುಡನ್ ಗಿರಿ ಹೆಸರು ಬದಲಾವಣೆ ಮಾಡುವಂತೆ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳಿಗೆ ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ.
ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ಇರುವಂತೆ ಪಠ್ಯಪುಸ್ತಕಗಳಲ್ಲಿ ಮುದ್ರಣ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸೂಚನೆ ನೀಡಿದ್ದಾರೆ.
ಇನಾಂ ದತ್ತಾತ್ರೇಯ ಪೀಠ ಎಂದು ಮುದ್ರಿಸಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ. 4, 6, 9 ನೇ ತರಗತಿಯ ಪಠ್ಯ ಪುಸ್ತಕದಲ್ಲಿ ಮುದ್ರಿಸಲು ತಿಳಿಸಲಾಗಿದೆ. ಹೆಸರು ಬದಲಾವಣೆ ಮಾಡಬೇಕೆಂದು ಕೋರಿ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಮನವಿ ಸಲ್ಲಿಸಿದ್ದು, ನಂತರ ಸಚಿವರು ಈ ಬಗ್ಗೆ ಸೂಚನೆ ನೀಡಿದ್ದಾರೆನ್ನಲಾಗಿದೆ.