alex Certify ಪಠ್ಯಪುಸ್ತಕ ಪರಿಷ್ಕರಣೆಗೆ ಐದು ಸಮಿತಿ ರಚನೆ; 3 ತಿಂಗಳಲ್ಲಿ ಪರಿಷ್ಕರಿಸಿ ವರದಿ ನೀಡಲು ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಠ್ಯಪುಸ್ತಕ ಪರಿಷ್ಕರಣೆಗೆ ಐದು ಸಮಿತಿ ರಚನೆ; 3 ತಿಂಗಳಲ್ಲಿ ಪರಿಷ್ಕರಿಸಿ ವರದಿ ನೀಡಲು ಆದೇಶ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಲು ಐದು ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದೆ.

ಬಿಜೆಪಿ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದ ಪರೀಷ್ಕರಣೆ ರದ್ದು ಮಾಡಿರುವ ಕಾಂಗ್ರೆಸ್ ಸರ್ಕಾರ, ಇದೀಗ ಹೊಸ ಐದು ಸಮಿತಿ ರಚಿಸಿದೆ. ಈ ಸಮಿತಿಗಳು ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005ರ ಮಾರ್ಗಸೂಚಿಯಂತೆ ಸಮಾಜ ವಿಜ್ಞಾನ ಪಠ್ಯಪುಸ್ತಕಗಳೊಂದಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಯ ಪಠ್ಯಪುಸ್ತಗಳನ್ನು ಪರಿಷ್ಕರಿಸಲಿವೆ.

1ರಿಂದ 10ನೇ ತರಗತಿವರೆಗಿನ ಕನ್ನಡ, ಸಮಾಜ ವಿಜ್ಞಾನ ವಿಷಯಗಳ ಸಂಪೂರ್ಣ ಪಠ್ಯಪುಸ್ತಕ ಪರಿಷ್ಕರಣೆ ನಡೆಯಲಿದೆ. ಸಮಿತಿಯಲ್ಲಿ ಓರ್ವ ಮುಖ್ಯ ಸಂಯೋಜಕ, 5 ಜನ ಅಧ್ಯಕ್ಷರು, 37 ಜನ ಸದದ್ಯರು ಇದ್ದಾರೆ. 3 ತಿಂಗಳಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರಕ್ಕೆ ವರದಿ ನೀಡುವಂತೆ ಸೂಚಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಡಾ.ಮಂಜುನಾಥ್ ಜಿ.ಹೆಗಡೆ ಪಠ್ಯಪುಸ್ತಕ ಸಮಿತಿಯ ಮುಖ್ಯ ಸಂಯೋಜಕರಾಗಿದ್ದಾರೆ. 1ರಿಂದ 10ನೇ ತರಗತಿವರೆಗಿನ ಕನ್ನಡ ವಿಷಯದ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿರುವ ಡಾ.ಅಂಜನಪ್ಪ ಹಾಗೂ 9 ಜನ ಸದಸ್ಯರಿದ್ದಾರೆ. 1-10ನೇ ತರಗತಿಯ ದ್ವಿತೀಯ ಭಾಷೆ ಕನ್ನಡಕ್ಕೆ ಚಿಕ್ಕಮಗಳೂರು ಸರ್ಕಾರಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಹೆಚ್.ಎಸ್.ಸತ್ಯನಾರಾಯಣ ಹಾಗೂ 9 ಜನ ಸದಸ್ಯರು. 9-10ನೇ ತರಗತಿವರೆಗಿನ ತೃತಿಯ ಭಾಷೆ ಕನ್ನಡಕ್ಕೆ ದಾವಣಗೆರೆ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಡಾ.ಮಂಜಣ್ಣ ಹಾಗೂ 3 ಸದಸ್ಯರು. 6-7ನೇ ತರಗತಿ ಸಮಾಜ ವಿಜ್ಞಾನ ವಿಷಯಕ್ಕೆ ಕಲೌರ್ಗಿ ಕೇಂದ್ರೀಯ ವಿವಿ ಸಹಾಯಕ ಪ್ರಾಧ್ಯಾಪಕ ಡಾ.ಕಿರಣ್, 6 ಜನ ಸದಸ್ಯರು ಹಗೂ 8,9,10ನೇ ತರಗತಿವರೆಗಿನ ಸಮಾಜ ವಿಜ್ಞಾನ ವಿಷಯಕ್ಕೆ ಬೆಂಗಳೂರು ವಿವಿ ಇತಿಹಾಸ ಪ್ರಾಧ್ಯಪಕ ಡಾ.ಅಶ್ವತ್ಥ ನಾರಾಯಣ ಹಾಗು 9 ಜನ ಸದದ್ಸ್ಯರನ್ನು ನೇಮಕ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...