ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಪಠ್ಯದ ಕುರಿತಾಗಿ ಆಕ್ಷೇಪಣೆಗಳಿದ್ದಲ್ಲಿ ಅದನ್ನು ಸರಿಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿಗಳು ನೀಡಿದ ಮನವಿ ಆಧರಿಸಿ ಅಗತ್ಯ ಬದಲಾವಣೆ ಮಾಡಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಹೇಳಿದ್ದಾರೆ.
ಕರ್ನಾಟಕ ಮತ್ತು ಭಾರತವನ್ನು ಕಟ್ಟಲು ಶ್ರಮಿಸಿದ ಹಿರಿಯರು, ಮಹಾರಾಜರು, ಸಾಹಿತಿಗಳು, ಕಲಾವಿದರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಬಗ್ಗೆ ಗೌರವವಿದೆ. ಇದರಲ್ಲಿ ರಾಜಿ ಮಾಡಿಕೊಳ್ಳಲು ಸರ್ಕಾರ ತಯಾರಿಲ್ಲ. ಮುಂದಿನ ಪೀಳಿಗೆಗೆ ಮಹನೀಯರ ಸಾಧನೆ ತಿಳಿಸಲಾಗುವುದು ಎಂದರು.