ಬೆಂಗಳೂರು: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸಮಿತಿ ರಚನೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ಪ್ರಾಣೇಶ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಸಚಿವರು, ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಕುರಿತಂತೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಾಗುವುದು. ಸಮಿತಿ ರಚಿಸಿ ವರದಿ ಪಡೆಯಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಅನೇಕ ಸದಸ್ಯರು ನೈತಿಕ ಶಿಕ್ಷಣವನ್ನು ಪಠ್ಯದಲ್ಲಿ ಸೇರಿಸುವಂತೆ ಸಲಹೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಭಗವದ್ಗೀತೆ ಅಳವಡಿಸಲು ಸಮಿತಿ ರಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ.