alex Certify ಪಠ್ಯ ಕಡಿತ: 10 ನೇ ತರಗತಿ, ಪಿಯುಸಿ ವಾರ್ಷಿಕ ಪರೀಕ್ಷೆ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಠ್ಯ ಕಡಿತ: 10 ನೇ ತರಗತಿ, ಪಿಯುಸಿ ವಾರ್ಷಿಕ ಪರೀಕ್ಷೆ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಒಂದರಿಂದ 9 ನೇ ತರಗತಿವರೆಗೆ ಪಠ್ಯ ಕಡಿತ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಹೇಳಿದ್ದಾರೆ.

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...