ಬೆಂಗಳೂರು: ಮಕ್ಕಳಿಗೆ ಪುಸ್ತಕ ನೀಡದೆ 9 ಮತ್ತು 10ನೇ ತರಗತಿಗಳನ್ನು ಆರಂಭಿಸಲಾಗಿದ್ದು, ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಪಠ್ಯಪುಸ್ತಕಗಳನ್ನು ಒದಗಿಸಲು ಪೂರ್ವಸಿದ್ಧತೆ ಏಕೆ ಕೈಗೊಂಡಿಲ್ಲ? ಪಠ್ಯಪುಸ್ತಕಗಳು ಇಲ್ಲದೆ ಮಕ್ಕಳಿಗೆ ಶಾಲೆ ಆರಂಭಿಸಿರುವುದು ಅರ್ಥಹೀನವಾಗಿದೆ. ಪಠ್ಯಪುಸ್ತಕ ಪೂರೈಕೆ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಸರ್ಕಾರಿ, ಅನುದಾನಿತ ಶಾಲೆಗಳಿಗೆ ಪಠ್ಯಪುಸ್ತಕ ಪೂರೈಸಬೇಕು. 9, 10 ನೇ ತರಗತಿಯ ಮಕ್ಕಳಿಗೆ ಪಠ್ಯ ಪುಸ್ತಕ ಪೂರೈಕೆ ಮಾಡಬೇಕು ಎಂದು ತಿಳಿಸಲಾಗಿದ್ದು, ಆಗಸ್ಟ್ 30 ರೊಳಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ ಎನ್ನಲಾಗಿದೆ.