ಬೆಂಗಳೂರು: ರಾಜ್ಯದಲ್ಲಿ 25 ಮಿನಿ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ 10ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 25 ಮಿನಿ ಜವಳಿ ಪಾರ್ಕ್ ಸ್ಥಾಪಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ಶೇಕಡ 30ರಷ್ಟು ಜವಳಿ ಉತ್ಪಾದನೆ ಆಗುತ್ತಿತ್ತು. ಪ್ರಸ್ತು ಅಲ್ಲಿ ಅರಾಜಕತೆ ಸೃಷ್ಟಿಯಾಗಿರುವುದರಿಂದ ಜವಳಿ ಉತ್ಪಾದನೆ ಕುಸಿಯಲ್ಲಿದ್ದು, ಭಾರತದ ಜವಳಿಗೆ ಬೇಡಿಕೆ ಹೆಚ್ಚುತ್ತದೆ. ಇದರ ಲಾಭ ನಾವು ಪಡೆದುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.
ಜವಳಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಲಕ್ಷಾಂತರ ಮಂದಿಗೆ ಜವಳಿ ಕ್ಷೇತ್ರದಿಂದ ಉದ್ಯೋಗ ಸಿಗುತ್ತಿತ್ತು. ಜವಳಿ ಘಟಕಗಳನ್ನು ಸ್ಥಾಪಿಸಲು ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.