ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರೋಡ್ ಪ್ರದೇಶದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಮಾನವ ಕಳ್ಳಸಾಗಣೆ ತಡೆ ಘಟಕ ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಇನ್ಸ್ ಪೆಕ್ಟರ್ ದೇವಿದಾಸ್ ಹಂದೋರೆ ತಿಳಿಸಿದ್ದಾರೆ.
ದಂಧೆ ನಡೆಯುತ್ತಿದ್ದ ಸ್ಥಳದಿಂದ ಮೂವರು ಮಹಿಳೆಯರನ್ನೂ ರಕ್ಷಿಸಲಾಗಿದೆ. ಆರೋಪಿ ತನ್ನ ನಿರೀಕ್ಷಿತ ಗ್ರಾಹಕರಿಗೆ ವಾಟ್ಸಾಪ್ ನಲ್ಲಿ ಮಹಿಳೆಯರ ಚಿತ್ರಗಳನ್ನು ಫಾರ್ವರ್ಡ್ ಮಾಡುತ್ತಿದ್ದಳು. ಆಕೆಯ ವಿರುದ್ಧ ಐಪಿಸಿ ಮತ್ತು ಪಿಟಾ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಮೀರಾ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.