ಬೆಂಗಳೂರು : ವಿಶ್ವ ಆನೆ ದಿನವಾದ ಆಗಸ್ಟ್ 12 ರಂದು ʼಮಾನವ – ಆನೆ ಸಂಘರ್ಷʼ ಅಂತಾರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಅಮೆರಿಕ, ಜರ್ಮನಿ, ಜಪಾನ್, ಇಂಗ್ಲೆಂಡ್ ಸೇರಿ 11 ದೇಶಗಳ 17ಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ವಿವಿಧ ರಾಜ್ಯಗಳ 660 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಸಮ್ಮೇಳನ ನಡೆಯಲಿದೆ. ವನ್ಯಜೀವಿಗಳು ನಾಡಿಗೆ ಬಾರದಂತೆ ಬೇರೆ ಬೇರೆ ರಾಜ್ಯಗಳಲ್ಲಿ, ವಿದೇಶಗಳಲ್ಲಿ ಅನುಸರಿಸುತ್ತಿರುವ ತಂತ್ರಗಾರಿಕೆ, ಪದ್ಧತಿಗಳ ಬಗ್ಗೆ ಚಿಂತನ ಮಂಥನ ನಡೆಯಲಿದೆ. ಆನೆ – ಮಾನವ ಸಂಘರ್ಷ ತಗ್ಗಿಸುವುದಕ್ಕೆ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.