alex Certify ಗಮನಿಸಿ : ನಾಳೆ 384 ‘KAS’ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ, ಅಭ್ಯರ್ಥಿಗಳು ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ನಾಳೆ 384 ‘KAS’ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ, ಅಭ್ಯರ್ಥಿಗಳು ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ..!

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಆಗಸ್ಟ್ 27 ರಂದು ನಡೆಯಲಿದೆ.

ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:27-08-2024ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ವೆಬ್ ಸೈಟ್ http://kpsc.kar.nic.inನಿಂದ ಡೌನ್ ಲೋಡ್ ಮಾಡಿಕೊಂಡು ತಮಗೆ ಹಂಚಿಕೆಯಾಗಿರುವ ಪರೀಕ್ಷಾ ಉಪಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಹಾಗೂ ಕಡ್ಡಾಯವಾಗಿ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಈ ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

1. ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವುದಕ್ಕಿಂತ ಎರಡು ಗಂಟೆ ಮುಂಚಿತವಾಗಿ ಅಂದರೆ ಬೆಳಿಗ್ಗೆ,, 8.00 ಗಂಟೆಯೊಳಗೆ ಪರೀಕ್ಷಾ ಉಪಕೇಂದ್ರದ ಬಳಿ ಹಾಜರಿರತಕ್ಕದ್ದು.
2. ಬೆಳಗಿನ ಅಧಿವೇಶನಕ್ಕೆ 9:50ರ ನಂತರ ಮತ್ತು ಮಧ್ಯಾಹ್ನದ ಅಧಿವೇಶನಕ್ಕೆ 1:50 ರ ನಂತರ ಬರುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ.
3. ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇಕಾದ ದಾಖಲೆಗಳು:-
ಅ) ಪರೀಕ್ಷೆಯ ಪ್ರವೇಶ ಪತ್ರ (Exam Admit Card)
៧ w (original Identification card), Passport, PAN CARD, Voter ID, Aadhar- U.I.D., Govt. Employer Id (or) Driving Licence
៥)
ಇ) ಪಾಸ್ಪೋರ್ಟ್/ಸ್ಟಾಂಪ್ ಅಳತೆಯ 2 ಭಾವ ಚಿತ್ರಗಳು (Photo).
ಈ) ಅಂಗವಿಕಲ ಅಭ್ಯರ್ಥಿಗಳು (Person With Disabilities Candidates) ನಿಗದಿತ ಅಂಗವಿಕಲ ಪ್ರಮಾಣ ಪತ್ರಗಳು.
ಉ) ತಮ್ಮದೇ ಆದ ಲಿಪಿಕಾರರನ್ನು ಕರೆತರಲು ಆಯ್ಕೆ ಮಾಡಿಕೊಂಡಿರುವ 259 ಅಂಗವಿಕಲ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಲಿಪಿಕಾರರ ಪ್ರವೇಶ ಪತ್ರವನ್ನು ಸಹ ಡೌನ್ ಲೋಡ್ ಮಾಡಿಕೊಳ್ಳತಕ್ಕದ್ದು, ಸದರಿ 259 ಅಂಗವಿಕಲ ಅಭ್ಯರ್ಥಿಗಳು ತಮ್ಮದೇ ಆದ ಲಿಪಿಕಾರರನ್ನು ಕರೆತರದೇ ಇದ್ದಲ್ಲಿ, ಅಂತಹ ಅಭ್ಯರ್ಥಿಗಳು ಪರೀಕ್ಷಾ ದಿನದಂದು ಪರೀಕ್ಷಾ ಉಪಕೇಂದ್ರದ ಮುಖ್ಯಸ್ಮರನ್ನು ಲಿಪಿಕಾರರ ಸಹಾಯವನ್ನು ಒದಗಿಸುವಂತೆ ಕೋರಿದ್ದಲ್ಲಿ, ಸದರಿ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದು.

ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್ ಧರಿಸುವ ಹಾಗಿಲ್ಲ. ಅರ್ಧ ತೋಳಿನ ಶರ್ಟ್ ಧರಿಸಬೇಕು. ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು.ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ
ಯಾವುದೇ ರೀತಿಯ ಆಭರಣಗಳನ್ನುಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಚಪ್ಪಲಿಗಳನ್ನು ಧರಿಸಿ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು ಹಾಗೂ ಜೊತೆಗೆ ಬ್ಲಾಕ್ ಬಾಲ್ ಪಾಯಿಂಟ್ ಪೆನ್ನನ್ನು ತರತಕ್ಕದ್ದು.ಒಎಂಆರ್ ಉತ್ತರ ಹಾಳೆಯಲ್ಲಿನ ಎಲ್ಲಾ ನಮೂದು (Marking) ಗಳನ್ನು ಕಪ್ಪು ಬಾಲ್ ಪಾಯಿಂಟ್ ಪೆನ್ನಿನಿಂದ ಮಾತ್ರ ಮಾಡತಕ್ಕದ್ದು.

ಚೀಟಿಯ ಪ್ರತಿ ಪ್ರವೇಶಪತ್ರದ ಪ್ರತಿ ಹಾಗೂ ಪಾಸ್ಪೋರ್ಟ್/ ಸ್ಟ್ಯಾಂಪ್ಅಳತೆಯ 2 ಭಾವಚಿತ್ರಗಳನ್ನು ಕಡ್ಡಾಯವಾಗಿ ಸಂವೀಕ್ಷಕರಿಗೆ ನೀಡಿ ಒಂದು ಭಾವಚಿತ್ರವನ್ನು ನಾಮಿನಲ್ ರೋಲ್ ನಲ್ಲಿನ ನಿಗದಿತ ಅಂಕಣದಲ್ಲಿ ಮತ್ತು ಇನ್ನೊಂದು ಭಾವಚಿತ್ರವನ್ನು ಈ ಸಂಬಂಧ ಸಲ್ಲಿಸುವ ಮುಚ್ಚಳಿಕೆ ಪತ್ರದಲ್ಲಿ ಅಂಟಿಸಿ ದೃಢೀಕರಿಸುವುದು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...