ಬೆಂಗಳೂರು: ರಾಜ್ಯದ 19 ನೇ ರಾಜ್ಯಪಾಲರಾಗಿ ಮಾಜಿ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜ್ಯಪಾಲರಾಗಿದ್ದ ವಿ.ಆರ್. ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಗುಜರಾತ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಭಾನುವಾರ ಬೆಳಗ್ಗೆ 10.30 ಕ್ಕೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸುವರು.
100 ಮಂದಿ ಗಣ್ಯರಿಗೆ ಮಾತ್ರ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಓಕ್ ನೂತನ ರಾಜ್ಯಪಾಲರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.