ಬೆಂಗಳೂರು: ರಾಜ್ಯದ 19 ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ರಾಜ್ಯಪಾಲರಿಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಪ್ರಮಾಣವಚನ ಬೋಧಿಸಿದರು.
ರಾಜ್ಯಪಾಲರಾಗಿದ್ದ ವಜುಭಾಯಿ ವಾಲಾ ನೂತನ ರಾಜ್ಯಪಾಲರ ಗೆಹ್ಲೋಟ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಈಶ್ವರನ ಹೆಸರಿನಲ್ಲಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.