ಅಲ್ಲು ಅರ್ಜುನ್ ನಟನೆಯ ಪುಷ್ಪ2 ಅಬ್ಬರದ ನಡುವೆಯೂ ‘ನಾ ನಿನ್ನ ಬಿಡಲಾರೆ’ ಎಂಬ ಕನ್ನಡ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಎರಡು ವಾರಗಳನ್ನು ಪೂರೈಸಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ. ಹೊಸ ಪ್ರತಿಭೆಗಳ ಅದ್ಭುತ ನಟನೆಗೆ ಪ್ರೇಕ್ಷಕ ಪ್ರಭುಗಳು ಬಹುಪರಾಕ್ ಎಂದಿದ್ದಾರೆ.
ನವೀನ್ ಜಿಎಸ್ ನಿರ್ದೇಶನದ ಹಾರರ್ ಥ್ರಿಲ್ಲರ್ ಕಥಾಧಾರಿತ ಈ ಚಿತ್ರದಲ್ಲಿ ಅಂಬಲಿ ಭಾರತಿ ಸೇರಿದಂತೆ ಪಂಚಿ, ಕೆ ಎಸ್ ಶ್ರೀಧರ್, ಶ್ರೀನಿವಾಸ ಪ್ರಭು, ಹರಿಣಿ ಶ್ರೀಕಾಂತ್, ಸೀರುಂಡೆ ರಘು, ಮಹಾಂತೇಶ್, ಲಕ್ಷ್ಮಿ ಸಿದ್ದಯ್ಯ, ಮಂಜುಳಾ ರೆಡ್ಡಿ, ನಾಗರಾಜ್ ರಾವ್ ಬಣ್ಣ ಹಚ್ಚಿದ್ದು, ಕಮಲ ಉಮಾ ಭಾರತಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಶ್ರೀಮತಿ ಭಾರತಿ ಬಾಲಿ ನಿರ್ಮಾಣ ಮಾಡಿದ್ದಾರೆ. ದೀಪಕ್ ಸಿ ಎಸ್ ಸಂಕಲನ, ಡಿಫರೆಂಟ್ ಡ್ಯಾನಿ ಮತ್ತು ನರಸಿಂಹ ಸಾಹಸ ನಿರ್ದೇಶನವಿದ್ದು, ವೀರೇಶ್ ಛಾಯಾಗ್ರಹಣವಿದೆ. ಇನ್ನುಳಿದಂತೆ ಎಂಎಸ್ ತ್ಯಾಗರಾಜ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.