alex Certify ಗಮನಿಸಿ : ಶಿವಮೊಗ್ಗದಲ್ಲಿ ಇಂದು ನಿಗದಿಯಾಗಿದ್ದ ಬೃಹತ್ ‘ಉದ್ಯೋಗ ಮೇಳ’ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಶಿವಮೊಗ್ಗದಲ್ಲಿ ಇಂದು ನಿಗದಿಯಾಗಿದ್ದ ಬೃಹತ್ ‘ಉದ್ಯೋಗ ಮೇಳ’ ಮುಂದೂಡಿಕೆ

ಶಿವಮೊಗ್ಗ : 15-09-2023 ರಂದು ಇಂದು ಶಿವಮೊಗ್ಗದ ಸೈನ್ಸ್ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಮುಂದೂಡಲಾಗಿದೆ.

ಗೌರಿ ಗಣೇಶ ಹಬ್ಬವಿರುವುದರಿಂದ ಉದ್ಯೋಗ ಮೇಳಕ್ಕೆ ಹಾಜರಾಗುವ ಆಕಾಂಕ್ಷಿಗಳ ಪ್ರಮಾಣ ಕಡಿಮೆಯಾಗುವ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ನಂತರ ನಡೆಯುವ ಮೇಳದ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ದರ್ಜೆ-1 ತಿಳಿಸಿದ್ದಾರೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೆ. 15ರಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಉದ್ಯೋಗಮೇಳವನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಕೂಡ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...