ಕ್ಯಾಬ್ ಚಾಲಕನೋರ್ವ ಮಹಿಳೆಗೆ ಖಾಸಗಿ ಅಂಗ ತೋರಿಸಿ ಅನುಚಿತವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಮಹಿಳೆ ಘಟನೆ ಬಗ್ಗೆ ಪೋಸ್ಟ್ ಮಾಡಿದ್ದರು. ಈಕೆಯ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು, ಇದೀಗ ಮಹಿಳೆ ಮತ್ತೊಂದು ಪೋಸ್ಟ್ ಹಾಕಿದ್ದಾರೆ.
ಮತ್ತೊಂದು ಪೋಸ್ಟ್ ಮಾಡಿರುವ ಮಹಿಳೆ ಊಬರ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕ್ಯಾಬ್ ಚಾಲಕರ ದುರ್ನಡತೆಯ ಸಮಸ್ಯೆಯನ್ನು ಎತ್ತಿ ತೋರಿಸುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲಿಂಕ್ಡ್ಇನ್ನಲ್ಲಿ ತನ್ನ ಆಘಾತಕಾರಿ ಅನುಭವವನ್ನು ಹಂಚಿಕೊಂಡ ಸಂತ್ರಸ್ತೆ, ಆಕೆಯ ಪೋಸ್ಟ್ ತ್ವರಿತವಾಗಿ ವೈರಲ್ ಆಗುತ್ತಿದ್ದಂತೆ ವ್ಯಾಪಕ ಬೆಂಬಲವನ್ನು ಪಡೆದಿದ್ದಾರೆ.
ಕ್ಯಾಬ್ ಬುಕ್ ಮಾಡಿದ ನಂತರ ಚಾಲಕನು ನನ್ನನ್ನು ಕರೆದುಕೊಂಡು ಹೋಗಲು ಬಂದಿದ್ದನು. ಮೊದಲು ಚೆನ್ನಾಗಿಯೇ ಇದ್ದ, ನಂತರ ಇದ್ದಕ್ಕಿದ್ದಂತೆ ಅಸಭ್ಯವಾಗಿ ವರ್ತಿಸಲು ಶುರು ಮಾಡಿದ್ದನು. ನಾನು ಬೇಗ ಹೋಗಬೇಕು, ಬೇಗ ಹೋಗಲು ನಾನು ತಲುಪಬೇಕಿದ್ದ ಸ್ಥಳಕ್ಕೆ ಬಿಡಲು ಕೇಳಿಕೊಂಡೆ. ನಂತರ ಹಣ ಕೊಡುವ ವೇಳೆ ನನಗೆ ಖಾಸಗಿ ಅಂಗ ತೋರಿಸಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಬರೆದುಕೊಂಡಿದ್ದಾರೆ. ಘಟನೆಗೆ ಪ್ರತಿಕ್ರಿಯೆಯಾಗಿ, ಉಬರ್ ತಕ್ಷಣ ಭಾಗಿಯಾಗಿರುವ ಚಾಲಕನ ವಿರುದ್ಧ ಕ್ರಮ ಕೈಗೊಂಡಿತು.