ಬೆಂಗಳೂರು: ವಿಧಾನಸಭೆಯಲ್ಲಿ ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ತಾಳ್ಮೆ ಯಿಂದ ಇರುವಂತೆ ಸಿಎಂ ಸೂಚನೆ ನೀಡಿದ ಪ್ರಸಂಗ ನಡೆಯಿತು.
ನಿಲುವಳಿ ಪ್ರಸ್ತಾವದ ವೇಳೆ ಶಾಸಕ ಯತ್ನಾಳ್, ಸರ್ಕಾರದ ಗ್ಯಾರಂಟಿ ಯೋಜನೆ ವಿಳಂಬದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಸಿಎಂ ಸಿದ್ದರಾಮಯ್ಯ, ಯತ್ನಾಳ್ ಅವರೇ ಸ್ವಲ್ಪ ತಾಳ್ಮೆಯಿಂದ ಇರಿ. ನಿಮ್ಮನ್ನು ವಿಪಕ್ಷ ನಾಯಕನನ್ನಾಗಿ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಈ ರೀತಿ ಮಾಡಿದರೆ ವಿಪಕ್ಷ ನಾಯಕನನ್ನಾಗಿ ಮಾಡ್ತಾರೆ ಅಂದುಕೊಂಡ್ರಾ? ಎಂದು ಗುಡುಗಿದರು.
ಸದನ ಆರಂಭವಾಗಿ ಮೂರು ದಿನವಾಗುತ್ತಾ ಬಂದರೂ ವಿಪಕ್ಷ ನಾಯಕನನ್ನು ನೇಮಕ ಮಾಡಲು ಆಗಿಲ್ಲ, ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ. ಇಲ್ಲಿ ಎದ್ದೆದ್ದು ನಿಂತು ಮಾತನಾಡಿದರೆ ನಿಮ್ಮನ್ನು ವಿಪಕ್ಷ ನಾಯಕ ಮಾಡ್ತಾರೆ ಅಂತ ಅಂದುಕೊಂಡ್ರಾ? ಎಂದು ಕಿಚಾಯಿಸಿದರು.