ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡವರ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಕಾರ್ಮಿಕರಾದ ರಾಜೇಶ್ ಹಾಗೂ ಪಟಾಕಿ ಮಳಿಗೆಗೆ ಬಂದಿದ್ದ ಗ್ರಾಹಕ ವೆಂಕಟೇಶ್ ಸ್ಥಿತಿ ಗಂಭೀರವಾಗಿದ್ದು, ಇವರಿಗೆ ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರ ದೇಹವು ಶೇ.40 ರಷ್ಟು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಹೊರವಲಯದಲ್ಲಿರುವ ಪಟಾಕಿ ಅಂಗಡಿ ಮತ್ತು ಗೋದಾಮಿನಲ್ಲಿ ಶನಿವಾರ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಇದುವರೆಗೆ 14 ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಅಂಗಡಿ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.