ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’-11 ಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಬಿಗ್ಬಾಸ್ ಶೋಗೆ ಸಾಗರ ಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಸೀಸನ್- 11ರ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಬಿಗ್ ಬಾಸ್- 11ನೇ ಸೀಸನ್ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ವಕೀಲ ಕೆ.ಎಲ್. ಭೋಜರಾಜ್ ಅವರು ಸಾಗರದ ಪ್ರಧಾನ ವ್ಯವಹಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಕೋರ್ಟ್ ವಿಚಾರಣೆಯನ್ನು ಕೈಗೊಂಡಿದ್ದು , ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರು ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಲಾಗಿದೆ. ಹಾಗೂ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಅ.28 ಕ್ಕೆ ನಿಗದಿಪಡಿಸಿದೆ.
ಹಲವು ವಿವಾದಕ್ಕೆ ಗುರಿಯಾಗುತ್ತಿರುವ ಬಿಗ್ ಬಾಸ್ ಶೋ ಪ್ರಸಾದ ಬಂದ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ಶೋಷಣೆ ಮಾಡಲಾಗುತ್ತಿದೆ ಎಂದು ಮಹಿಳಾ ಆಯೋಗದಿಂದ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ರಾಮನಗರ ಜಿಲ್ಲಾ ಪೊಲೀಸರು ‘ಬಿಗ್ ಬಾಸ್’ ಆಯೋಜಕರಿಗೆ ನೋಟಿಸ್ ನೀಡಿದ್ದಾರೆ. ಈ ಬೆನ್ನಲ್ಲೇ ಶೋ ನಿಲ್ಲಿಸುವಂತೆ ಕೋರ್ಟ್ ಅರ್ಜಿ ಸಲ್ಲಿಸಲಾಗಿದೆ.